ವಿಟ್ಲ ಸರ್ಕಾರಿ ಐಟಿಐನಲ್ಲಿ ಮಕ್ಕಳ ಸುರಕ್ಷತೆ, ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಕಾರ್ಯಕ್ರಮ

0

ವಿಟ್ಲ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಟ್ಲದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಕಾನೂನು ಅರಿವು ಕುರಿತ ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಿಟ್ಲ ಆರಕ್ಷಕ ಠಾಣೆಯ ಉಪ ನಿರೀಕ್ಷಕ ಬಿ.ಎಸ್. ನಾಯಕ್ ಅವರು ಉಪಸ್ಥಿತರಿದ್ದು ಮಾತನಾಡಿ, ವಿದ್ಯಾರ್ಥಿಗಳು ಕಾನೂನು ಮತ್ತು ಸಂಚಾರ ನಿಯಮಗಳನ್ನು ಪಾಲಿಸಿ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

ಮಕ್ಕಳ ಸುರಕ್ಷತೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಪೋಕ್ಸೋ ಕಾಯ್ದೆಯ ಪ್ರಮುಖ ಅಂಶಗಳ ಬಗ್ಗೆಯೂ ಅರಿವು ಮೂಡಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಹರೀಶ್ ಅವರು, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಇಂತಹ ಜಾಗೃತಿ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು.

ಕಿರಿಯ ತರಬೇತಿ ಅಧಿಕಾರಿ ಶರತ್ ಕುಮಾರ್ ಎಸ್.ಎಚ್. ಸ್ವಾಗತಿಸಿದರು. ಜಯಂತ್ ವಂದನಾರ್ಪಣೆ ಸಲ್ಲಿಸಿದರು. ಪ್ರಭಾರ ತರಬೇತಿ ಅಧಿಕಾರಿ ರತಿ ವಿ. ಕಾರ್ಯಕ್ರಮ ಸಂಯೋಜಿಸಿದರು. ಎಲ್ಲಾ ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here