ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ರಾಜ್ಯ ಸಹಕಾರ ಭಾರತಿ ಸಂಘಟನಾ ಕಾರ್ಯದರ್ಶಿ ಮಂಜುನಾಥ ಭೇಟಿ

0

ಆಲಂಕಾರು:ರಾಜ್ಯ ಸಹಕಾರ ಭಾರತಿ ಸಂಘಟನಾ ಕಾರ್ಯದರ್ಶಿ ಮಂಜುನಾಥ ತುಮಕೂರು, ದ. ಕ. ಜಿಲ್ಲಾ ಸಹಕಾರ ಭಾರತಿ ಕಾರ್ಯದರ್ಶಿ ಗಣೇಶ ಶೆಣೈ ಮರೋಳಿಯವರು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಸಂಘದಲ್ಲಿ ನಡೆಯುವ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ರಮೇಶ ಭಟ್ ಉಪ್ಪಂಗಳ ಉಪಾಧ್ಯಕ್ಷರಾದ ದಯಾನಂದ ರೈ ಮನವಳಿಕೆಗುತ್ತು, ಮುಖ್ಯಕಾರ್ಯನಿರ್ವಹಣಾಧಿಕಾರಿ ಮನೋಹರ ಪ್ರಕಾಶ್.ಡಿ ಯವರು ಸ್ವಾಗತಿಸಿ ಸಂಘದಲ್ಲಿ ನಡೆಯುವ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿ ಸಂಘದ ವತಿಯಿಂದ ಗೌರವಿಸಿದರು.

LEAVE A REPLY

Please enter your comment!
Please enter your name here