ನಾಳೆ (ಆ.14) ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ

0

ಪುತ್ತೂರು: ವಿಶ್ವ ಹಿಂದೂ ಪರಿಷದ್, ಬಜರಂಗದಳ, ಹಿಂದು ಜಾಗರಣಾ ವೇದಿಕೆಯ ಆಶ್ರಯದಲ್ಲಿ ಭಾರತದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ ಮತ್ತು ವಂದೇ ಮಾತರಂ ಗೀತೆಗೆ 150ನೇ ವರ್ಷ ತುಂಬಿದ ಅಂಗವಾಗಿ ಮತ್ತು ಅಖಂಡ ಭಾರತದ ಸಂಕಲ್ಪದೊಂದಿಗೆ ಆ.14ರಂದು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ ಸಂಜೆ ಗಂಟೆ 7ರಿಂದ ನಡೆಯಲಿದೆ.


ಪಂಜಿನ ಮೆರವಣಿಗೆಯು ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಬಳಿಯಿಂದ ಹೊರಟು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಸಭಾ ಕಾರ್ಯಕ್ರಮದೊಂದಿಗೆ ಸಂಪನ್ನಗೊಳ್ಳಲಿದೆ. ಬೊಳುವಾರಿನಲ್ಲಿ ಹಿಂದು ಜಾಗರಣ ವೇದಿಕೆ ಗೌರವಾಧ್ಯಕ್ಷ ಡಾ. ಎಂ.ಕೆ.ಪ್ರಸಾದ್ ಅವರು ಮೆರಣಿಗೆಗೆ ಚಾಲನೆ ನೀಡಲಿದ್ದಾರೆ. ಕಿಲ್ಲೆ ಮೈದಾನದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಭಾರತ ಮಾತಾ ಪೂಜನಾ ಮತ್ತು ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಉದ್ಯಮಿ ಕೇಶವ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ಸೇವಾ ಭಾರತಿಯ ಪ್ರಮುಖ ರಾಜೇಶ್ ಮೇನಾಲ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here