






ಕಡಬ: ಕಡಬದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಆಟಿದ ಪೊರ್ಲು ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಸೈಂಟ್ ಜೋಕಿಮ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಫಾ.ಪಾವ್ಲ್ ಪ್ರಕಾಶ್ ಡಿಸೋಜಾ ಮಾತನಾಡಿ ಇಂತಹ ಕಾರ್ಯಕ್ರಮಗಳನ್ನು ಆಚರಿಸುವುದರ ಮೂಲಕ ನಮ್ಮ ತುಳುನಾಡಿನ ಆಚಾರ ವಿಚಾರ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿದ ಉಮೇಶ್ ಸಾಯಿರಾಂ ನೂಜಿಬಾಳ್ತಿಲ ಮಾತನಾಡಿ ಮಕ್ಕಳು ತಮ್ಮ ಹಿರಿಯರಿಂದ ಉತ್ತಮ ಸಂಸ್ಕಾರವನ್ನು ಕಲಿತು ಅದನ್ನು ಮುಂದುವರೆಸಿಕೊಂಡು ಇಂದಿನ ಜೀವನ ಶೈಲಿಗೆ ಬೇಕಾದ ಉತ್ತಮ ಸಾಂಪ್ರದಾಯಿಕ ಆಹಾರ ಸೇವನೆ ಮಾಡಿ ಆರೋಗ್ಯವಂತರಾಗಿರಬೇಕು ಎಂದು ಹೇಳಿದರು.


ವೇದಿಕೆಯಲ್ಲಿ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲಾ ವಿಭಾಗದ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಗಣೇಶ್ ಡಿ, ಪ್ರೌಢಶಾಲಾ ವಿಭಾಗದ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಪವಿತ್ರ ರೈ, ಸೈಂಟ್ ಆನ್ಸ್ ಶಾಲಾ ಪ್ರಾಂಶುಪಾಲರಾದ ಫಾ.ಸುನಿಲ್ ಪ್ರವೀಣ್ ಪಿಂಟೋ, ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕಿರಣ್ ಕುಮಾರ್, ಸೈಂಟ್ ಜೋಕಿಮ್ಸ್ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಶ್ರೀಲತಾ. ಕೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟೆರ್ ಹಿಲ್ದಾ ರೊಡ್ರಿಗಸ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಸಪ್ರಶ್ನೆ, ಆಟಿ ತಿಂಗಳಲ್ಲಿ ಮಾಡುವ ತಿಂಡಿ ತಿನಿಸುಗಳ ಪ್ರದರ್ಶನ, ಪ್ರಾಚೀನ ಕಾಲದ ವಸ್ತುಗಳ ಪ್ರದರ್ಶನ ನಡೆಯಿತು. ಸೈಂಟ್ ಜೋಕಿಮ್ಸ್ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಆಫೀಕ್ ಸ್ವಾಗತಿಸಿದರು. 9ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಶಮೀಮ್ ವಂದಿಸಿದರು. 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಲಹರಿ ಕಾರ್ಯಕ್ರಮ ನಿರೂಪಿಸಿದರು.













