ಆ.15: ಪಾಪೆಮಜಲು ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ, ಅಭಿನಂದನೆ, ಸನ್ಮಾನ ಸಮಾರಂಭ

0

ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ, ಸಾಧಕರಿಗೆ ಅಭಿನಂದನೆ ಹಾಗೂ ಸನ್ಮಾನ ಸಮಾರಂಭ ಆ.15ರಂದು ಬೆಳಿಗ್ಗೆ ಗಂಟೆ 10ಕ್ಕೆ ಶಾಲಾ ಆವರಣದಲ್ಲಿ ನಡೆಯಲಿದೆ.


ಶೇ.100ರಷ್ಟು ಫಲಿತಾಂಶ ದಾಖಲಿಸಿದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ತಂಡ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಗುವುದು. ಇದೇ ವೇಳೆ ಪಾಪೆಮಜಲು ಪ್ರೌಢ ಶಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಉಪಪ್ರಾಂಶುಪಾಲರಾಗಿ ಪದೋನ್ನತಿ ಹೊಂದಿ ನಿವೃತ್ತರಾದ ವಸಂತ ಮೂಲ್ಯ ಪಿ. ಅವರನ್ನು ಸನ್ಮಾನಿಸಲಾಗುವುದು.

ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದು, ಪ್ರಗತಿಪರ ಕೃಷಿಕ ವಾಸು ಪೂಜಾರಿ ಗುಂಡ್ಯಡ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅರಿಯಡ್ಕ ವಲಯ ಅರಣ್ಯ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ರೈ ಕುತ್ಯಾಡಿ ಸನ್ಮಾನ ನೆರವೇರಿಸಲಿದ್ದಾರೆ. ಅತಿಥಿಗಳಾಗಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ಸುರೇಶ್, ಚಂದ್ರಶೇಖರ ಬಲ್ಯಾಯ ನಿನಾದ ಮದ್ಲ, ವಸಂತ ರೈ ಕುತ್ಯಾಡಿ, ಮಾತೃಶ್ರೀ ಅರ್ಥ್ ಮೂವರ್ಸ್ ಕುಂಬ್ರ ಇದರ ಮಾಲಕ ಮೋಹನದಾಸ್ ರೈ, ನಿವೃತ್ತ ಶಿಕ್ಷಕಿ ಇಂದಿರಾ ಪಿ, ನಿವೃತ್ತ ಮುಖ್ಯಗುರು ಥೆರೇಸಾ ಸಿಕ್ವೇರಾ, ಕುಂಬ್ರ ವರ್ತಕರ ಸಂಘದ ಉಪಾಧ್ಯಕ್ಷ ಸದಾಶಿವ, ಕೌಡಿಚ್ಚಾರು ಬದ್ರಿಯಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಹಾಜಿ, ಕೌಡಿಚ್ಚಾರು ನಿಶು ಸ್ಟುಡಿಯೋದ ನವೀನ್ ಪಕ್ಕಳ ಹಾಗೂ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವೀನ್ ಭಂಡಾರಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಗ್ರಾಮಸ್ಥರು, ಹೆತ್ತವರು, ಶಿಕ್ಷಣ ಪ್ರೇಮಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಲಾ ಎಸ್.ಡಿಎಂ.ಸಿ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್, ಮುಖ್ಯ ಶಿಕ್ಷಕ ಮೋನಪ್ಪ ಪಿ ಹಾಗೂ ಶಿಕ್ಷಕ ವೃಂದ, ಎಸ್‌ಡಿಎಂಸಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿ ವೃಂದದವರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here