







ಪುತ್ತೂರು: ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ( SUDA ) ಅಧ್ಯಕ್ಷ ಕೆ.ಎಂ. ಮುಸ್ತಫ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಡಾ.ಯು.ಟಿ. ಖಾದರ್ ರವರನ್ನು ಭೇಟಿ ಮಾಡಿ ಇತ್ತೀಚೆಗೆ 2ನೇ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಅತ್ಯಂತ ಮಹತ್ವದ ಹೆಚ್ಚುವರಿ ಖಾತೆಯಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಖ್ಫ್, ಹಜ್ ಖಾತೆಯನ್ನು ವಹಿಸಿಕೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.


ಸದಾ ನಿರಂತರ ಸಮಾಜ ಸೇವೆ, ಯಾವುದೇ ಜವಾಬ್ದಾರಿ ನಿರ್ವಹಿಸಲು ಬದ್ಧತೆ ಹೊಂದಿರುವ ಯು. ಟಿ. ಖಾದರ್ ರವರಿಗೆ ಇನ್ನಷ್ಟು ಉನ್ನತ ಹುದ್ದೆ ಸಿಗುವಂತಾಗಲಿ ಎಂದು ಶುಭ ಹಾರೈಸಲಾಯಿತು. ಮೀಫ್ ಶೈಕ್ಷಣಿಕ ಒಕ್ಕೂಟದ ಗೌರವಾಧ್ಯಕ್ಷ ಉಮ್ಮರ್ ಟೀಕೇ ಉಪಸ್ಥಿತರಿದ್ದರು













