ಆಗಸ್ಟ್ 15 : ಅಂಬಿಕಾದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ : ಮಾಜಿ ಸೈನಿಕರು, ಬಿಎಸ್‌ಎಫ್ ಯೋಧರಿಗೆ ಕುಟುಂಬ ಸಹಿತ ಭೋಜನಕೂಟ – ಸಮ್ಮಿಲನ ಕಾರ್ಯಕ್ರಮ

0

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ೮೦ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪುತ್ತೂರು ತಾಲೂಕಿನ ಮಾಜಿ ಸೈನಿಕರು ಹಾಗೂ ಬಿಎಸ್‌ಎಫ್ ಯೋಧರಿಗೆ ಸಕುಟುಂಬ ಸಮ್ಮಿಲನ ಹಾಗೂ ಭೋಜನಕೂಟ ಕಾರ್ಯಕ್ರಮವನ್ನು ಆಗಸ್ಟ್ ೧೫ರಂದು ಅಪರಾಹ್ನ ೧೨ ಗಂಟೆಗೆ ಬಪ್ಪಳಿಗೆಯ ಅಂಬಿಕಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಆಯೋಜಿಸಲಾಗಿದೆ.


ದೇಶಕ್ಕಾಗಿ ತಮ್ಮ ತಾರುಣ್ಯವನ್ನು ಸಮರ್ಪಿಸಿಕೊಂಡ ವೀರಯೋಧರನ್ನು ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಾಲೂಕಿನ ಸಮಸ್ತ ಮಾಜಿ ಸೈನಿಕರು ಮತ್ತು ಬಿಎ???ಫ್ ಯೋಧರು ತಮ್ಮ ಕುಟುಂಬ ವರ್ಗದವರೊಂದಿಗೆ ಆಗಮಿಸುವಂತೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಪ್ರಕಟಣೆಯಲ್ಲಿ ಕೋರಿದ್ದಾರೆ.


ಸ್ವಾತಂತ್ರ್ಯ ದಿನಾಚರಣೆ : ಸ್ವಾತಂತ್ರ್ಯೋತ್ಸವ ಪ್ರಯುಕ್ತ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳಿಂದ ಬೆಳಗ್ಗೆ ಧ್ವಜಾರೋಹಣದ ಬಳಿಕ ಕಿಲ್ಲೆ ಮೈದಾನದ ಬಳಿಯ ಅಮರ್ ಜವಾನ್ ಜ್ಯೋತಿ ಸ್ವಾರಕದೆಡೆಗೆ ಭವ್ಯ ಮೆರವಣಿಗೆ ನಡೆಯಲಿದೆ. ಮಂಗಲ್ ಪಾಂಡೆ ಚೌಕದ ಬಳಿ ಸರ್ಕಾರಿ ಧ್ವಜಾರೋಹಣದ ಬಳಿಕ ಬಪ್ಪಳಿಗೆಯ ಅಂಬಿಕಾ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ ೯.೩೦ಕ್ಕೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಜರಗಲಿದೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅರ್ಧಯಕ್ಷ ಸುಬ್ರಮಣ್ಯ ನಟ್ಟೋಜ ಕಾರ್ಯಕ್ರಮದ ಆಧ್ಯಕ್ಷತೆಯನ್ನು ವಹಿಸಲಿದ್ದಾರೆ. ವಾಗ್ಮಿ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮುಖ್ಯಭಾಷಣಕಾರರಾಗಿ ಆಗಮಿಸಲಿದ್ದಾರೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಆಡಟಳಿತಾಧಿಕಾರಿ ಗಣೇಶ ಪ್ರಸಾದ್ ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here