ಸುಬ್ರಹ್ಮಣ್ಯದ ವಿವಿಧ ಸಂಘ ಸಂಸ್ಥೆಯಿಂದ ಬೊಬ್ಬೆಕೇರಿ ಶಾಲೆಗೆ ಪೀಠೋಪಕರಣಗಳ ಕೊಡುಗೆ ಹಸ್ತಾಂತರ

0

ಮಕ್ಕಳ ಶಿಕ್ಷಣದ ಪ್ರಗತಿಗೆ, ಶಾಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿ- ಉಮೇಶ್ ಕೆ. ಎನ್ ಕಾರ್ಲಾಡಿ

ಕಾಣಿಯೂರು: ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಸುಬ್ರಹ್ಮಣ್ಯ ಇವರ ಸಹಭಾಗಿತ್ವದಲ್ಲಿ ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗೆ ಅಗತ್ಯ ಟೇಬಲ್ ಹಾಗೂ ಚಯರ್ ಗಳನ್ನು ಕೊಡುಗೆಯಾಗಿ ಹಸ್ತಾಂತರಿಸಲಾಯಿತು.


ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘದ ಅಧ್ಯಕ್ಷ ಉಮೇಶ್ ಕೆ.ಎನ್ ಅವರು ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕುಳಿತುಕೊಳ್ಳಲು ಅಗತ್ಯವಿರುವ ಪೀಠೋಪಕರಣ ಸೇರಿದಂತೆ ವಿವಿಧ ಸಾಮಗ್ರಿಗಳನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು.


ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಸುನೀತಾ ಗಣೇಶ್ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಮಾತನಾಡಿದ ಸುಬ್ರಹ್ಮಣ್ಯ ಅಖಿಲ ಭಾರತ ಅಯ್ಯಪ್ಪ ಸೇವಾ ಸಮಿತಿ ಅಧ್ಯಕ್ಷ ಉಮೇಶ್ ಕೆ.ಎನ್ ಕಾರ್ಲಾಡಿ, ಶಾಲೆಯ ಮಕ್ಕಳ ಭವಿಷ್ಯಕ್ಕಾಗಿ ಅತ್ಯಗತ್ಯವಾಗಿ ಬೇಕಾಗಿದ್ದ ಪೀಠೋಪಕರಣಗಳನ್ನು ಹಸ್ತಾಂತರ ಮಾಡಲು ಅತ್ಯಂತ ಸಂತೋಷವಾಗುತ್ತಿದ್ದು, ಈ ಕೊಡುಗೆಯು ಮಕ್ಕಳ ಶಿಕ್ಷಣದ ಪ್ರಗತಿಗೆ ಮತ್ತು ಶಾಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿ ಎಂದರು. ಶಾಲಾ ಮುಖ್ಯ ಶಿಕ್ಷಕಿ ಶಶಿಕಲಾ ಮಾತನಾಡಿ, ಸರ್ಕಾರಿ ಶಾಲೆಯ ಮಕ್ಕಳಿಗೆ ಸಂಘ-ಸಂಸ್ಥೆಗಳು ನೀಡಿರುವ ಪೀಠೋಪಕರಣಗಳು ಅತ್ಯಂತ ಅಗತ್ಯವಾಗಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಇಂತಹ ಸಮಾಜಮುಖಿ ಕಾರ್ಯಗಳು ಮುಂದುವರಿದು ಸಮಾಜದ ಅಭಿವೃದ್ಧಿಗೆ ಸಂಘ-ಸಂಸ್ಥೆಗಳು ಇನ್ನಷ್ಟು ಕೊಡುಗೆ ನೀಡಲಿ ಎಂದು ಆಶಿಸಿದರು.


ಸುಬ್ರಹ್ಮಣ್ಯ ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘದ ಅಧ್ಯಕ್ಷ ಉಮೇಶ್ ಕೆ. ಎನ್ ಕಾರ್ಲಾಡಿ, ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ರೋಹಿತ್ ಬಿ.ಬಿ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಅಧ್ಯಕ್ಷ ಡಾ. ರವಿ ಕಕ್ಕೆಪದವು,ಝೋನಲ್ ಲೆಫ್ಟಿನೆಂಟ್ ಚಂದ್ರಶೇಖರ ನಾಯರ್, ರೋಟರಿ ನಿಕಟಪೂರ್ವಾಧ್ಯಕ್ಷ ಜಯಪ್ರಕಾಶ್.ಆರ್, ಪ್ರಮುಖರಾದ ಸುದರ್ಶನ ಶೆಟ್ಟಿ, ವೆಂಕಟೇಶ ಎಚ್.ಎಲ್., ಚಿದಾನಂದ ಕುಳ, ಸಂತೋಷ್ ಸುಬ್ರಹ್ಮಣ್ಯ, ಎಸ್‌ಡಿಎಂಸಿ ಅಧ್ಯಕ್ಷೆ ಸುನಿತಾ ಗಣೇಶ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಎಸ್‌ಡಿಎಂಸಿ ಉಪಾಧ್ಯಕ್ಷ ರಮೇಶ್ ಉಪ್ಪಡ್ಕ,ಸದಸ್ಯರಾದ ಸದಾನಂದ ಕಡೀರ, ಸುಧಾಕರ್ ಕಾಣಿಯೂರು, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಅನಂತ ಕುಮಾರ್ ಬೈಲಂಗಡಿ, ಹಿರಿಯ ವಿದ್ಯಾರ್ಥಿ ಸುಲಕ್ಷಣ ರೈ ಪೈಕ, ಶಿಕ್ಷಕರಾದ ಜನಾರ್ದನ ಹೇಮಳ, ಗೀತಾ ಕುಮಾರಿ, ಶೋಭಿತ, ಸುರೇಖಾ, ಜಯಲತಾ, ಸುಶ್ಮಿತ ಮತ್ತಿತರರು ಉಪಸ್ಥಿತರಿದ್ದರು. ರೋಟರಿ ಕ್ಲಬ್ ನ ಪೂರ್ವ ಅಧ್ಯಕ್ಷ ಜಯಪ್ರಕಾಶ್ ಆರ್ ಸ್ವಾಗತಿಸಿ, ಗೌರವ ಶಿಕ್ಷಕಿ ಶ್ರುತಿ ಕಾರ್ಯಕ್ರಮ ನಿರೂಪಿಸಿದರು. ದಿವ್ಯ ವಂದಿಸಿದರು.

ಸನ್ಮಾನ :
ಕೊಡುಗೆ ಪ್ರಾಯೋಜಕರಾದ ಉಮೇಶ್ ಕೆ.ಎನ್., ಡಾ. ರವಿ ಕಕ್ಕೆಪದವು ಹಾಗೂ ರೋಹಿತ್ ಬಿ.ಬಿ. ಅವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.

LEAVE A REPLY

Please enter your comment!
Please enter your name here