ಕಳ್ಳತನ ಪ್ರಕರಣ : ವಾರೆಂಟ್ ಆರೋಪಿ ಸುಳ್ಯದ ಮಹಮ್ಮದ್ ಶರೀಫ್ ಪುತ್ತೂರಿನಲ್ಲಿ ಬಂಧನ

0

ಪುತ್ತೂರು: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯದ ಮಹಮ್ಮದ್ ಶರೀಫ್ ಎಂಬಾತನನ್ನು ವೇಣೂರು ಠಾಣಾ ಪೊಲೀಸರು ಆ.13ರಂದು ಪುತ್ತೂರಿನ ದರ್ಬೆಯಲ್ಲಿ ಬಂಧಿಸಿದ್ದಾರೆ.

ಕಳವು ಪ್ರಕರಣಕ್ಕೆ ಸಂಬಂಧಿಸಿ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 71/2008ರಂತೆ ಐಪಿಸಿ ಕಲಂ 457 ಮತ್ತು 380ರಡಿ ಕೇಸು ದಾಖಲಾಗಿತ್ತು. ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಆರೋಪಿ ಮಹಮ್ಮದ್ ಶರಿಫ್ ಬಂಧನಕ್ಕೆ ಬೆಳ್ತಂಗಡಿ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯಾಗಿರುವ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ನೆಲ್ಲಿಕಟ್ಟೆ ನಿವಾಸಿ ಆದಮ್ ಎಂಬವರ ಪುತ್ರ ಮಹಮ್ಮದ್ ಶರೀಫ್ (46) ಎಂಬಾತನನ್ನು ಪುತ್ತೂರಿನ ದರ್ಬೆಯಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಮತ್ತು ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ಮಾರ್ಗದರ್ಶನದಲ್ಲಿ ವೇಣೂರು ಠಾಣಾ ಎಸ್‌ಐ ಅಕ್ಷಯ್ ಢವಗಿ ನೇತೃತ್ವದ ತಂಡ ನಡೆಸಿದ ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಬೆಣ್ಣಿಚನ್, ಬಸವರಾಜ್ ಹಾಗೂ ಬೆಳ್ತಂಗಡಿ ಉಪವಿಭಾಗ ಕಚೇರಿ ಸಿಬ್ಬಂದಿ ಪ್ರವೀಣ್ ಮೂರುಗೋಳಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here