







ಉಪ್ಪಿನಂಗಡಿ: ಕಾಂಚನದ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ ನಡೆಯಿತು.


ಮುಖ್ಯ ಅತಿಥಿಯಾಗಿ ಆಗಮಿಸಿದ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ಸುತೇಶ್, ಪೋಷಕರಿಗೆ ಪೋಕ್ಸೋ ಕಾಯ್ದೆಯ ಬಗ್ಗೆ ಜಾಗೃತಿ ಹಾಗೂ ಮಾದಕ ವಸ್ತುಗಳ ಬಳಕೆ ಮತ್ತು ಇದರಿಂದ ಎದುರಾಗುವ ಸಮಸ್ಯೆಗಳು, ಸೈಬರ್ ಸೆಕ್ಯೂರಿಟಿ ಬಗ್ಗೆ ಮಾಹಿತಿಯನ್ನು ನೀಡಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯಗುರು ಎ. ಲಕ್ಷ್ಮಣ ಗೌಡ ಶಾಲಾ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಇಲಾಖಾ ಮಾಹಿತಿಗಳನ್ನು ತಿಳಿಸಿದರು.



ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಮಧುಶ್ರೀ ಯಾದವ ಗೌಡ ನೆಕ್ಕರೆ, ವಿದ್ಯಾರ್ಥಿಗಳನ್ನು ಉತ್ತಮ ವಿದ್ಯಾರ್ಥಿಯಾಗಿ ರೂಪಿಸುವಲ್ಲಿ ಪೋಷಕರ ಜವಾಬ್ದಾರಿಯನ್ನು ತಿಳಿಸಿದರು.
ವೇದಿಕೆಯಲ್ಲಿ ಪ್ರೌಢಶಾಲೆಯ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷೆ ನಯನಾ ಉರಾಬೆ ಉಪಸ್ಥಿತರಿದ್ದರು. ಸಹ ಶಿಕ್ಷಕಿಯರಾದ ರಮ್ಯಶ್ರೀ ಸ್ವಾಗತಿಸಿದರು. ಹೇಮಾವತಿ ವಂದಿಸಿದರು. ಸುಮಾ ಡಿ. ಕಾರ್ಯಕ್ರಮ ನಿರೂಪಿಸಿದರು.










