






ಪುತ್ತೂರು: ಡಾ. ಶಿವರಾಮ ಕಾರಂತರ ಬಾಲವನದಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.



ಸಹಾಯಕ ಆಯುಕ್ತರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನದ ಕುರಿತು ಶುಭಾಶಯ ಭಾಷಣ ಮಾಡಿದರು. ದೇಶದ ಸ್ವಾತಂತ್ರ್ಯ ಹೋರಾಟದ ಮಹತ್ವವನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಬಾಲವನ ಅಭಿವೃದ್ಧಿ ಸಮಿತಿಯ ಸದಸ್ಯರು, ಬಾಲವನದ ಆಕ್ವೇಟಿಕ್ ಕ್ಲಬ್ ಸದಸ್ಯರು, ಈಜು ಶಿಬಿರಾರ್ಥಿಗಳು ಹಾಗೂ ಊರಿನ ಸಾರ್ವಜನಿಕರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ರಾಷ್ಟ್ರೀಯ ವಿಪತ್ತು ಪಡೆ NDRF ತಂಡದ ವತಿಯಿಂದ ಪಥಸಂಚಲನ ನಡೆಯಿತು. ಕಾರ್ಯಕ್ರಮದ ಯಶಸ್ಸಿಗೆ ಬಾಲವನದ ಸಿಬ್ಬಂದಿಗಳು ಸಹಕರಿಸಿದರು.













