






ಈಶ್ವರಮಂಗಲ: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಈಶ್ವರಮಂಗಲ ಪಂಚಲಿಂಗೇಶ್ವರ ಪ್ರೌಢಶಾಲಾ ವಿದ್ಯಾರ್ಥಿಗಳು ಸ್ವಾತಂತ್ರ್ಯ ಮೆರವಣಿಗೆ ನಡೆಸಿದರು.


ರಾಷ್ಟ್ರಧ್ವಜ ಹಿಡಿದು, ದೇಶಭಕ್ತಿ ಘೋಷಣೆ ಕೂಗುತ್ತ ವಿದ್ಯಾರ್ಥಿಗಳು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು ಮೊಳಗಿದವು.ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಗೋಪಾಲಕೃಷ್ಣ ಕುಂಜತ್ತಾಯ, ಸಂಚಾಲಕ ಸರ್ವತ್ತೋಮ ಬೋರ್ಕರ್, ಮುಖ್ಯಗುರು ಹಾಗೂ ಶಿಕ್ಷಕರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಸ್ವಾತಂತ್ರ್ಯದ ಮಹತ್ವ ಹಾಗೂ ದೇಶಭಕ್ತಿಯ ಕುರಿತು ಅಧ್ಯಕ್ಷರು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.













