ಕಡಬ ಗಣೇಶ್ ಬಿಲ್ಡಿಂಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕಡಬ: ಕಡಬದ ಶ್ರೀ ಗಣೇಶ್ ಬಿಲ್ಡಿಂಗ್‌ನಲ್ಲಿ ದೇಶದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಟ್ಟಡ ಮಾಲೀಕರಾದ ಸುಂದರ ಮಂಡೆಕರ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿದರು.ಮಾತನಾಡಿದ ಅವರು, “ದೇಶದ ಸ್ವಾತಂತ್ರ್ಯವನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ದೇಶದ ಏಕತೆ, ಸೌಹಾರ್ದತೆ ಹಾಗೂ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು” ಎಂದು ಸ್ವಾತಂತ್ರ್ಯ ದಿನದ ಮಹತ್ವವನ್ನು ವಿವರಿಸಿದರು.ಈ ಸಂದರ್ಭದಲ್ಲಿ ಗಣೇಶ್ ಬಿಲ್ಡಿಂಗ್‌ನ ವಿವಿಧ ಅಂಗಡಿಗಳ ಮಾಲಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಮೋಹನ್ ಕೊಯಿಲ ಅವರು ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here