ಕಾವು : ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ

0

ಕಾವು: ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಅಧ್ಯಕ್ಷರಾದ ಅಬ್ದುಲ್ ಅಜೀಜ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿದ್ಯಾರ್ಥಿಗಳು, ಪೋಷಕರು ಹಾಗೂ ನೆರೆದಿದ್ದ ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು. ನಂತರ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಭಾರತೀಯ ವಾಯುಪಡೆಯ ನಿವೃತ್ತ ಸರ್ಜೆಂಟ್ ಶಾಮ್ ಪ್ರಸಾದ್ ದೇವಸ್ಯ ಅವರು ಪಥಸಂಚಲನದ ವೇಳೆ ವಿದ್ಯಾರ್ಥಿಗಳ ಗೌರವ ವಂದನೆಯನ್ನು ಸ್ವೀಕರಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಕಾವು ಪೇಟೆಯಲ್ಲಿ ದೇಶಭಕ್ತಿ ಘೋಷಣೆಗಳೊಂದಿಗೆ ಮೆರವಣಿಗೆ ನಡೆಯಿತು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಅಬ್ದುಲ್ ಅಜೀಜ್ ಅವರು ಅಧ್ಯಕ್ಷೀಯ ಭಾಷಣ ಮಾಡಿದರು. ಮುಖ್ಯ ಅತಿಥಿ ಶಾಮ್ ಪ್ರಸಾದ್ ದೇವಸ್ಯ ಅವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಹೀರಾ ಅಬ್ದುಲ್ ಖಾದರ್ ಹಾಜಿ ಹಾಗೂ ಬುಶ್ರಾ ಎಜುಕೇಶನಲ್ ಟ್ರಸ್ಟ್‌ನ ನಿರ್ದೇಶಕರಾದ ಕಲಂದರ್ ಶಾಫಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಖಜಾಂಜಿ ರವಿರಾಜ್ ಬೋರ್ಕರ್, ಶಾಲಾ ಹಿತೈಷಿಯಾದ ಸುರೇಶ್ ಆಳ್ವ, ಬುಶ್ರಾ ಎಜುಕೇಶನ್ ಟ್ರಸ್ಟ್‌ನ ನಿರ್ದೇಶಕರಾದ ಕಾಶಿಫ್ ಸಿನಾಜ್, ಶಿಕ್ಷಕ-ರಕ್ಷಕ ಸಂಘದ ಸದಸ್ಯರಾದ ಶಾಹುಲ್ ಹಮೀದ್, ಅರಿಯಡ್ಕ ಗ್ರಾಮ ಪಂಚಾಯಿತಿ ಸದಸ್ಯರಾದ ಅಬ್ದುಲ್ ರಹಿಮಾನ್, ಶಾಲಾ ನಾಯಕ ಮಿತೇಶ್ ನಾಯ್ಕ್ ಹಾಗೂ ಶಾಲಾ ನಾಯಕಿ ಖದೀಜತುಲ್ ಅಫ್ರಾ ಉಪಸ್ಥಿತರಿದ್ದರು.

ಶಾಲಾ ಆಡಳಿತ ನಿರ್ದೇಶಕರಾದ ಬದ್ರುದ್ದೀನ್ ಮತ್ತು ನೂರುದ್ದೀನ್,ಆಡಳಿತ ಸಂಯೋಜಕರಾದ ಇಮ್ತಿಯಾಜ್ ಸಿ.ಎಂ.ಹಾಗೂ ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಕೃಷ್ಣ ಪ್ರಸಾದ್ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ದೀಪಿಕಾ ಚಾಕೋಟೆ ಅವರು ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ಖದೀಜತುಲ್ ಸನಾ ಮತ್ತು ಶಿಕ್ಷಕಿ ಹೇಮಲತಾ ಕಜೆಗದ್ದೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿವೇಣಿ ಕುಲಾಲ್ ಅವರು ವಂದಿಸಿದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಮನರಂಜನೀಯ ಹಾಗೂ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ, ಉಪಾಧ್ಯಕ್ಷರಾದ ರವಿಪ್ರಸಾದ್ ರೈ ಹಾಗೂ ಪೋಷಕರಾದ ಅಬ್ದುಲ್ ಲತೀಫ್ ಅಮ್ಚಿನಡ್ಕ ಮತ್ತು ಜಬ್ಬಾರ್ ಅವರು ವಿದ್ಯಾರ್ಥಿಗಳಿಗೆ ಸಿಹಿತಿಂಡಿಗಳನ್ನು ನೀಡಿ ಸಹಕರಿಸಿದರು.

ಶಾಲಾ ಶಿಕ್ಷಕಿಯರಾದ ಅನ್ಸಿಲ್ಲಾ ರೋಷಣಿ ಮೊಂತೆರೊ ಮತ್ತು ತ್ರಿವೇಣಿ ಕುಲಾಲ್ ಅವರು ಕಾರ್ಯಕ್ರಮದ ಸಂಯೋಜನೆಯನ್ನು ಯಶಸ್ವಿಯಾಗಿ ನಿರ್ವಹಿಸಿದರು.

ದೇಶಭಕ್ತಿ, ಶಿಸ್ತು ಮತ್ತು ಸಾಂಸ್ಕೃತಿಕ ವೈವಿಧ್ಯತೆಯಿಂದ ಕೂಡಿದ್ದ ಕಾರ್ಯಕ್ರಮವು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಅತಿಥಿಗಳಲ್ಲಿ ಸಂತಸ ಮೂಡಿಸುವುದರೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here