






ಉಪ್ಪಿನಂಗಡಿ: ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಸಂಘದ ಅಧ್ಯಕ್ಷ ಎಸ್. ತೋಯಜಾಕ್ಷ ಶೆಟ್ಟಿ 80ನೇ ವರ್ಷ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣಗೈದು, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.


ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ತನಿಯ ಪೂಜಾರಿ, ನಿರ್ದೇಶಕರಾದ ಸುನೀಲ್ ನೆಲ್ಸನ್ ಪಿಂಟೋ, ನೀಲಪ್ಪ ಗೌಡ, ಜಾರಪ್ಪ ಗೌಡ, ಲಕ್ಷ್ಮಣ ನಾಯ್ಕ, ಅಬ್ದುಲ್ ಲತೀಫ್, ರೇವತಿ ಪಿ., ಶಾಂತ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಪುಷ್ಪಾ ಡಿ. ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.













