ಪುತ್ತೂರು ವಕೀಲರ ಭವನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

0

ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಲು ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ್ ಕರೆ

ಪುತ್ತೂರು: ಪುತ್ತೂರಿನ ನೂತನ ನ್ಯಾಯಾಲಯ ಸಂಕೀರ್ಣದಲ್ಲಿರುವ, ವಕೀಲರ ಭವನದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವವದ ಸಭಾ ಕಾರ್ಯಕ್ರಮದಲ್ಲಿ, ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ರವರು ಅತಿಥಿ ಸ್ಥಾನದಿಂದ ಮಾತನಾಡುತ್ತಾ, ಹಿರಿಯರು ತ್ಯಾಗದಿಂದ ಗಳಿಸಿದ ಸ್ವಾತಂತ್ರವನ್ನು, ಮತ್ತೊಬ್ಬರ ಸ್ವಾತಂತ್ರ್ಯವನ್ನು ಕಸಿಯುವುದಕ್ಕೆ ಬಳಸದೆ, ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಲು ಕರೆ ನೀಡಿದರು.

ಮತ್ತೋರ್ವ ಮುಖ್ಯ ಅತಿಥಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಆರ್ ರಮ್ಯಾ ರವರು,ಸಂವಿಧಾನದ ಆಶಯಗಳನ್ನು ತಿಳಿಯಪಡಿಸಿದರು. 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್, ಹಿರಿಯ ನ್ಯಾಯವಾದಿಗಳಾದ ರಾಮ್ ಮೋಹನ್ ರಾವ್ ಮತ್ತು ಜಗನ್ನಿವಾಸ್ ರಾವ್ ಸಂದರ್ಭೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಹಿರಿಯ ವಕೀಲರಾದ ಎಂ ಜಿ ಗೋಪಾಲಕೃಷ್ಣ ಭಟ್ ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಜಿ.ಜಗನ್ನಾಥ ರೈ, ವಕೀಲರ ಸಂಘದ ಕಾರ್ಯದರ್ಶಿ ಸ್ವಾತಿ ಜಗನ್ನಾಥ ರೈ , ಜೊತೆ ಕಾರ್ಯದರ್ಶಿ ಉದಯಚಂದ್ರ.ಕೆ, ಕೋಶಾಧಿಕಾರಿ ಭಾರತಿ.ಎ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ನಿವೃತ್ತ ಸೈನಿಕರಾದ ಹರೀಶ್ ಕುಮಾರ್ ( ಪ್ರಸ್ತುತ ಪೊಲೀಸ್ ಕರ್ತವ್ಯ) ಮತ್ತು ಸೆಲ್ವಂ( ಪ್ರಸ್ತುತ ನ್ಯಾಯಾಲಯದ ಸಿಬ್ಬಂದಿ) ರವರನ್ನು ಗೌರವಿಸಲಾಯಿತು.

ವಕೀಲರ ಸಂಘದ ಅಧ್ಯಕ್ಷರಾದ ಸಂತೋಷ್ ಕುಮಾರ್ ಎಂ ರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ಅತಿಥಿಗಳನ್ನು ಸ್ವಾಗತಿಸಿದರು. ಉಪಾಧ್ಯಕ್ಷರಾದ ಮಹಾಬಲ ಶೆಟ್ಟಿ ಕೂಮ್ಮಂಡ ಧನ್ಯವಾದ ಸಮರ್ಪಿಸಿದರು. ನ್ಯಾಯವಾದಿ ನೂರುದ್ದೀನ್ ಸಾಲ್ಮರ ಕಾರ್ಯಕ್ರಮವನ್ನು ನಿರೂಪಿಸಿದರು. ಸಭಾ ಕಾರ್ಯಕ್ರಮದ ಮೊದಲು ವಕೀಲರ ಭವನದಲ್ಲಿ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ವಕೀಲರ ಸಂಘದ ಅಧ್ಯಕ್ಷರಾದ ಸಂತೋಷ್ ಕುಮಾರ್ ಎಂ ನಿರ್ವಹಿಸಿದರು. ಈ ಸಂದರ್ಭದಲ್ಲಿ ನ್ಯಾಯಾಧೀಶರುಗಳು, ಎಲ್ಲಾ ಹಿರಿಯ ಕಿರಿಯ ನ್ಯಾಯವಾದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here