ನೀರ್ಕಜೆ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

0

ಪುಣಚ: ದ.ಕ ಜಿ.ಪಂ.ಹಿ.ಪ್ರಾ.ಶಾಲೆ ನೀರ್ಕಜೆ ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.


ಮಾಜಿ ಸೈನಿಕರಾದ ಸುಂದರ ಗೌಡ ನಡುಬೈಲು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಮಾಜಿ ಸೈನಿಕರಾದ ಭಾಸ್ಕರ ಬಡೆಕೋಡಿ ಜೊತೆಗಿದ್ದರು.


ಎಸ್.ಡಿ.ಎಂ.ಸಿ ಅಧ್ಯಕ್ಷ ಐತಪ್ಪ ಗೌಡ ವಳಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕ ಬಾಬು ನಾಯ್ಕ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿ ನವೀನ್ ಕುಮಾರ್ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಮಕ್ಕಳಿಂದ ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಪ್ರಭಾರ ಮುಖ್ಯ ಶಿಕ್ಷಕಿ ಶೀಲಾವತಿ ಕೆ ಸ್ವಾಗತಿಸಿದರು. ಶಿಕ್ಷಕ ರವಿ ನಾಯ್ಕ ವಂದಿಸಿದರು. ಶಿಕ್ಷಕಿ ದಿವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ಹಳೆ ವಿದ್ಯಾರ್ಥಿಗಳು ಶಾಲಾ ಮಕ್ಕಳಿಗೆ ಪೆನ್ನು, ಪುಸ್ತಕಗಳನ್ನು ಹಂಚಿದರು. ಎಲ್ಲರಿಗೂ ಪಾಯಸದ ಸಿಹಿ ಊಟದೊಂದಿಗೆ, ಊರಿನ ದಾನಿಗಳು ಹಳೆ ವಿದ್ಯಾರ್ಥಿಗಳು ನೀಡಿದ ಸಿಹಿತಿಂಡಿಯನ್ನು ವಿತರಿಸಲಾಯಿತು. ಮಾಜಿ ಸೈನಿಕರು,ಎಸ್.ಡಿ.ಎಂ.ಸಿ ಪದಾಧಿಕಾರಿಗಳು,ಸದಸ್ಯರು ಗ್ರಾ.ಪಂ.ಮಾಜಿ ಸದಸ್ಯರುಗಳು,ಪೋಷಕರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here