ಕೆಮ್ಮಿಂಜೆ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

0

ಕೆಮ್ಮಿಂಜೆ : ಕೆಮ್ಮಿಂಜೆ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ವೈಭವದಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ಎಸ್‌ಡಿಎಂಸಿ ಅಧ್ಯಕ್ಷರಾದ ಮೋಹನ್ ಕೆ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮುಖ್ಯಗುರು ಸಂತೋಷ್ ಎಸ್ ಸ್ವಾಗತಿಸಿದರು.ಕಾರ್ಯಕ್ರಮದಲ್ಲಿ ವಂದೇ ಮಾತರಂ, ರಾಷ್ಟ್ರಗೀತೆ, ಧ್ವಜಗೀತೆ ಹಾಗೂ ಘೋಷ್ ಮೆರವಣಿಗೆ ನಡೆಯಿತು. ವಿದ್ಯಾರ್ಥಿಗಳು ದೇಶಭಕ್ತಿಗೀತೆ, ಭಾಷಣ ಹಾಗೂ ವೈವಿಧ್ಯಮಯ ನೃತ್ಯಗಳ ಮೂಲಕ ದೇಶಭಕ್ತಿ ಮತ್ತು ಸ್ವಾತಂತ್ರ್ಯದ ಮಹತ್ವವನ್ನು ಸಾರಿದರು. ಮಕ್ಕಳ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕಿ ಕಸ್ತೂರಿ ನಿರೂಪಣೆ ಮತ್ತು ವಂದನಾರ್ಪಣೆ ಮಾಡಿದರು.ಸ್ಥಳೀಯ ಅಂಗನವಾಡಿ ಶಿಕ್ಷಕರು, ಮಕ್ಕಳು ಸೇರಿದಂತೆ ನೂರಾರು ಮಂದಿ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕೊನೆಯಲ್ಲಿ ಸಿಹಿ ಮತ್ತು ಭೋಜನ ವ್ಯವಸ್ಥೆ ಮಾಡಲಾಗಿತ್ತು.


LEAVE A REPLY

Please enter your comment!
Please enter your name here