ಕೂರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕಾಣಿಯೂರು: ಕೂರ ಅಂಗನವಾಡಿ ಕೇಂದ್ರದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಅಧ್ಯಕ್ಷರು, ನ್ಯಾಯವಾದಿ ಮುನೀರಾ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಬೆಳಂದೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ, ಮಾಜಿ ಸದಸ್ಯರಾದ ತಾರ ಅನ್ಯಾಡಿ, ಪ್ರವೀಣ್ ಕೆರೆನಾರು, ಗುತ್ತಿಗೆದಾರ ಲೋಕೇಶ್ ಬಿ.ಎನ್, ಕುದ್ಮಾರು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಚಂದ್ರ ಬರೆಪ್ಪಾಡಿ, ಅಂಗನವಾಡಿ ಕೇಂದ್ರದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಅನ್ಯಾಡಿ, ಆಶಾಕಾರ್ಯಕರ್ತೆಯರಾದ ರುಕ್ಮಿಣಿ, ಪದ್ಮಾವತಿ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಮಹಿಳಾ ಮಂಡಲದ ಸದಸ್ಯರು, ಯುವತಿ ಮಂಡಲದ ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ವಸಂತಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಹಾಯಕಿ ಲಲಿತಾ ಸಹಕರಿಸಿದರು.

LEAVE A REPLY

Please enter your comment!
Please enter your name here