






ಸೇಡಿಯಾಪು: ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಮತ್ತು ರಿಕ್ಷಾ ಚಾಲಕ ಮಾಲಕರ ವತಿಯಿಂದ ಸೇಡಿಯಪು ರಿಕ್ಷಾ ತಂಗುದಾಣದ ಎದುರುಗಡೆ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು.ಧ್ವಜಾರೋಹಣವನ್ನು ರಿಕ್ಷಾ ಚಾಲಕ ಜಯಂತ ಕುಲಾಲ್ ನೆರವೇರಿಸಿದರು.


ಈ ಸಂದರ್ಭದಲ್ಲಿ ಫ್ರೆಂಡ್ಸ್ ಕ್ಲಬ್ ನ ಗೌರವ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಸತೀಶ್ ಮಡಿವಾಳ, ಅಂಗನವಾಡಿ ಕಾರ್ಯಕರ್ತೆ ಶಾಲಿನಿ, ಬಸಿರ್ ಹಾಜಿ, ಉದ್ಯಮಿ ಅನಿಲ ಕೋಡಿ, ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷ ಜಯಂತ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.ದಾರಂದ ಕುಕ್ಕು ಅಂಗನವಾಡಿಯ ಸ್ತ್ರೀ ಶಕ್ತಿ ಸದಸ್ಯರು, ಪುಟಾಣಿಗಳು ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಜಯಪ್ರಕಾಶ್ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಶಾಲಿನಿ ಧನ್ಯವಾದ ಅರ್ಪಿಸಿದರು.













