






ಪುತ್ತೂರು: ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ಕುಂಬ್ರ ವರ್ತಕರ ಸಂಘ ಇದರ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ವಿವಿಧ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಸಿಹಿತಿಂಡಿ ವಿತರಿಸಿ ಸಂಭ್ರಮಿಸಲಾಯಿತು.



ಕಾರ್ಯಕ್ರಮದ ಭಾಗವಾಗಿ ವರ್ತಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಕುಂಬ್ರ, ಪರ್ಪುಂಜ ಮತ್ತು ಶೇಖಮಲೆ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಿದರು. ಜತೆಗೆ ಕುಂಬ್ರ, ಪರ್ಪುಂಜ, ಕೊಯಿಲತಡ್ಕ, ಸಾರೆಪುಣಿ ಹಾಗೂ ಶೇಖಮಲೆ ಭಾಗದ ಅಂಗನವಾಡಿಗಳಿಗೂ ತೆರಳಿ ಪುಟಾಣಿ ಮಕ್ಕಳಿಗೆ ಸಿಹಿ ಹಂಚಿ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು.



ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮ ಮತ್ತು ಸಂತಸವನ್ನು ಶಾಲಾ ಮಕ್ಕಳೊಂದಿಗೆ ಹಂಚಿಕೊಳ್ಳುವ ಸದುದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ಪಿ.ಕೆ ಮಹಮ್ಮದ್ ಕೂಡುರಸ್ತೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರ್ತಕರ ಸಂಘದ ಈ ನಿರಂತರ ಸಾಮಾಜಿಕ ಕಳಕಳಿ ಹಾಗೂ ಸೇವಾ ಮನೋಭಾವಕ್ಕೆ ಸ್ಥಳೀಯರು ಹಾಗೂ ಶಾಲಾ ಶಿಕ್ಷಕ ವೃಂದದವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.










