ಕುಡ್ತಮುಗೇರುವಿನಲ್ಲಿ ಚೇತನ್ ಪ್ರಕಾಶ್ ಕಜೆ ಅವರಿಗೆ ಪೌರ ಸನ್ಮಾನ

0


ಪುತ್ತೂರು: 2026ನೇ ಸಾಲಿನ ಪ್ರತಿಷ್ಠಿತ ಹೆಲ್ತ್‌ಕೇರ್ ಪ್ರಶಸ್ತಿ ಪುರಸ್ಕೃತ ಪುತ್ತೂರು ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಮ್ಯಾನೆಂಜಿಂಗ್ ಡೈರೆಕ್ಟರ್ ಚೇತನ್ ಪ್ರಕಾಶ್ ಕಜೆ ಅವರಿಗೆ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕುಡ್ತಮುಗೇರು ಟಾಪ್ ಆಂಡ್ ಟಾಪ್ ಚಾರಿಟೇಬಲ್ ಟ್ರಸ್ಟ್‌ನಿಂದ ಪೌರ ಸನ್ಮಾನ ಪತ್ರ ಪ್ರದಾನ ಮಾಡಲಾಯಿತು.


ಆ.15ರಂದು ಕುಡ್ತಮುಗೇರು ವಿಜಯಶ್ರೀ ಕಲ್ಯಾಣ ಮಂಟಪದಲ್ಲಿ ನಡೆದ ಸಂಸ್ಥೆಯ 8ನೇ ವಾರ್ಷಿಕೋತ್ಸವದಲ್ಲಿ ಈ ಪೌರ ಸನ್ಮಾನ ಕಾರ್ಯಕ್ರಮ ನಡೆಯಿತು. ಮಾಜಿ ಸಚಿವ ಬಿ.ರಮಾನಾಥ ರೈ, ಜಿ.ಪಂ ಮಾಜಿ ಸದಸ್ಯ ಎಂ.ಎಸ್ ಮಹಮ್ಮದ್ ಸಹಿತ ಅನೇಕ ಗಣ್ಯರ ಸಮ್ಮುಖದಲ್ಲಿ ಈ ಪೌರ ಸನ್ಮಾನ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here