ಮಧುರಾ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಮೇನಾಲ: ಮಧುರಾ ಇಂಟರ್‌ನ್ಯಾಷನಲ್ ಶಾಲೆ, ಮೇನಾಲದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಮತ್ತು ಸಂಭ್ರಮದೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮವು ಶ್ರೀಮತಿ ಫಾತಿಮತ್ ಶಫ್ರೀನಾ ಅವರ ಸ್ವಾಗತ ಭಾಷಣದೊಂದಿಗೆ ಆರಂಭವಾಯಿತು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಆಲಿ ಕುಂಞಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಗೀತೆಯನ್ನು ಹಾಡಲಾಯಿತು. ಈ ಸಂದರ್ಭದಲ್ಲಿ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ಫಾತಿಮಾ ಅಜೀಜ್, ಮುಖ್ಯೋಪಾಧ್ಯಾಯಿನಿ ಪುಷ್ಪಲತಾ ರಾವ್, ಆಡಳಿತಾಧಿಕಾರಿ ಶ್ರೀ ನಾಸಿರ್, ವ್ಯವಸ್ಥಾಪಕರಾದ ಶ್ರೀಮತಿ ಖದೀಜತ್ ರಹಿಯಾನಾ, ರಕ್ಷಕ-ಶಿಕ್ಷಕ ಸಂಘದ ಸದಸ್ಯರು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಧ್ವಜಾರೋಹಣದ ಬಳಿಕ ವಿದ್ಯಾರ್ಥಿಗಳು ಶಿಸ್ತುಬದ್ಧ ಹಾಗೂ ಸ್ಮರಣೀಯ ಪಥಸಂಚಲನ ನಡೆಸಿದರು. ನಂತರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಆಲಿ ಕುಂಞಿ, ಉಪಾಧ್ಯಕ್ಷರಾದ ಶ್ರೀಮತಿ ಫಾತಿಮಾ ಅಜೀಜ್, ಮುಖ್ಯೋಪಾಧ್ಯಾಯಿನಿ ಪುಷ್ಪಲತಾ ರಾವ್, ಆಡಳಿತಾಧಿಕಾರಿ ಶ್ರೀ ನಾಸಿರ್ ಹಾಗೂ ಮಾಜಿ ವಿದ್ಯಾರ್ಥಿನಿ ಮುನಾ ಅವರು ಮಾತನಾಡಿದರು.

ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇಶಭಕ್ತಿ ಗೀತೆಗಳು ಹಾಗೂ ನೃತ್ಯಗಳು ಪ್ರದರ್ಶನಗೊಂಡವು. ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಲಿಬಾ ಆಯಿಷಾ ಮತ್ತು ಫಾತಿಮಾ ಶಹೀದಾ ನಿರೂಪಿಸಿದರು.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು ಶ್ರೀಮತಿ ಖದೀಜಾ ಅವರು ವಾಚಿಸಿದರು. ಬಳಿಕ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಸಿಹಿತಿಂಡಿಗಳನ್ನೂ ವಿತರಿಸಲಾಯಿತು.

ಕಾರ್ಯಕ್ರಮದ ಕೊನೆಯಲ್ಲಿ ಶ್ರೀಮತಿ ಸುಸೇನಾ ಅವರು ವಂದನಾರ್ಪಣೆ ಸಲ್ಲಿಸಿದರು. ದೇಶಭಕ್ತಿ, ಶಿಸ್ತು ಹಾಗೂ ಸಂಭ್ರಮದ ವಾತಾವರಣದಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ಸಮಾಪ್ತಿಗೊಂಡಿತು.

LEAVE A REPLY

Please enter your comment!
Please enter your name here