







ನೆಟ್ಟಣಿಗೆ ಮುಡ್ನೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಬೆದ್ರಾಡಿ ಅಂಗನವಾಡಿ ಕೇಂದ್ರದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಕೇಂದ್ರದ ಮಕ್ಕಳು, ಪೋಷಕರು, ಊರಿನ ನಾಗರಿಕರು ಹಾಗೂ ಅಂಗನವಾಡಿ ಸಿಬ್ಬಂದಿಗಳೊಂದಿಗೆ ಆಚರಿಸಲಾಯಿತು.ಧ್ವಜಾರೋಹಣವನ್ನು ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶ್ರೀರಾಂ ಪಕ್ಕಳ ನೆರವೇರಿಸಿದರು. ಅವರು ಸ್ವಾತಂತ್ರ್ಯ ದಿನಾಚರಣೆಯ ಪ್ರಾಮುಖ್ಯತೆ ಮತ್ತು ಅಂಗನವಾಡಿಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ಕಾರ್ಯಕ್ರಮವನ್ನು ಕೇಂದ್ರದ ಕಾರ್ಯಕರ್ತೆ ಸೌಮ್ಯ ಸ್ವಾಗತಿಸಿ ವಂದಿಸಿದರು. ಕೇಂದ್ರದ ಸಹಾಯಕಿ ಪ್ರಮೀಳಾ ಸಹಕರಿಸಿದರು.












