







ಪುತ್ತೂರು: ನರಿಮೊಗರು ಮರಾಟಿ ಸಮಾಜ ಸೇವಾ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು.


ಸಂಘದ ಸ್ಥಾಪಕರೂ ಹಾಗೂ ಅಧ್ಯಕ್ಷರಾದ ಮಹಾಲಿಂಗ ನಾಯ್ಕ ನರಿಮೊಗರುರವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದರು. ಸಂಘದ ಕಾರ್ಯದರ್ಶಿ ಯೋಗೀಶ್ ಶಾಂತಿಗೋಡುರವರು ಸ್ವಾಗತಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು, ಹಲವರು ಉಪಸ್ಥಿತರಿದ್ದರು. ಬಳಿಕ ಆಗಮಿಸಿದವರಿಗೆ ಸಿಹಿತಿಂಡಿ ಹಾಗೂ ಉಪಹಾರದ ವ್ಯವಸ್ಥೆ ಏರ್ಪಡಿಸಲಾಗಿತ್ತು.













