






ಪುತ್ತೂರು: ನಾಗರಪಂಚಮಿ ಪ್ರಯುಕ್ತ ಆ. 17ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.


ನಾಗರಪಂಚಮಿ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ಅನ್ವಯಿಸಿದಂತೆ ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ಆ.17ರಂದು ಸ್ಥಳೀಯ ಸಾರ್ವತ್ರಿಕ ರಜೆ ಘೋಷಿಸಲು ತಮ್ಮ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ಕೈಗೊಳ್ಳುವಂತೆ ಸರಕಾರದ ಅಧೀನ ಕಾರ್ಯದರ್ಶಿ ತಿಳಿಸಿದ್ದರು. ಇದೀಗ ಜಿಲ್ಲಾಧಿಕಾರಿಗಳು ಸಾರ್ವತ್ರಿಕ ರಜೆ ಘೋಷಣೆ ಮಾಡಿದ್ದಾರೆ.













