







ಬಡಗನ್ನೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಗನ್ನೂರು ಇಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಲ್ಲಿ ಆಚರಿಸಲಾಯಿತು.


ಎಸ್ ಡಿ.ಎಂ.ಸಿ ಅಧ್ಯಕ್ಷರಾದ ಗಿರೀಶ್ ಗೌಡ ಕನ್ನಯ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ನೆರೆದಿರುವ ಅತಿಥಿ ಗಣ್ಯರು ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸ್ಮರಿಸಿದರು. ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕರಾದ ಜಯಂತ ರೈ ಕುದ್ಕಾಡಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ರೈ ಪಳ್ಳತ್ತಾರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಬಿ,, ಗ್ರಾ.ಪಂ ಮಾಜಿ ಸದಸ್ಯ ಸಂತೋಷ್ ಆಳ್ವ, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು



.ಮುಖ್ಯ ಅತಿಥಿಗಳೊಂದಿಗೆ ಶಾಲಾ ಆವರಣದಿಂದ ವಾದ್ಯ ಘೋಷಗಳೊಂದಿಗೆ ಹೊರಟ ಸ್ವಾತಂತ್ರ್ಯ ಜಾಥ ಮುಖ್ಯ ರಸ್ತೆಯ ಮೂಲಕ ಸಾಗಿ ಬಂದು ಬಳಿಕ ಸಿಹಿತಿಂಡಿಯನ್ನು ವಿತರಿಸಲಾಯಿತು.
ಸಭಾ ಕಾರ್ಯಕ್ರಮ
ಸ್ವಾತಂತ್ರ್ಯ ದಿನಾಚರಣೆಯ ಸಭಾ ಕಾರ್ಯಕ್ರಮವನ್ನು ಪ್ರಗತಿಪರ ಕೖಷಿಕ ಜಯಂತ ರೈ ಕುದ್ಕಾಡಿಯವರು ಉದ್ಘಾಟಿಸಿ ಮಾತನಾಡಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ಮಹಾನ್ ವೀರರ ಆದರ್ಶಗಳನ್ನು ಹೇಳುವುದರ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ನಾರಾಯಣ ರೈ ಕುದ್ಕಾಡಿಯವರು ಸ್ವಾತಂತ್ರ್ಯ ಪಡೆಯಲು ನಮ್ಮ ಹಿರಿಯರ ಕೊಡುಗೆಗಳನ್ನು ಸ್ಮರಿಸಿ, ವೀರರ ತ್ಯಾಗ ಬಲಿದಾನಗಳಿಂದಾಗಿ ನಾವಿಂದು ಸುಖವಾಗಿ ಸ್ವತಂತ್ರವಾಗಿ ಬದುಕುತ್ತಿದ್ದೇವೆ ಎಂದರು..
ಎಸ್ ಡಿ ಯಂ. ಸಿ ಅಧ್ಯಕ್ಷ ಗಿರೀಶ್ ಗೌಡ ಕನ್ನಯ ಸ್ವಾತಂತ್ರ್ಯ ದಿನದ ಮಹತ್ವವನ್ನು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ರೈ ಪಳ್ಳತ್ತಾರು ಪ್ರಾಸ್ತಾವಿಕ ಮಾತನಾಡಿದರು..
ಕಾರ್ಯಕ್ರಮದಲ್ಲಿ ಎಸ್ ಡಿ ಯಂ ಸಿ ಉಪಾಧ್ಯಕ್ಷೆ ಸುಲೋಚನಾ, ಸದಸ್ಯರಾದ ಬಾಬು ಮೂಲ್ಯ, ಬಾಬು ಬಿ, ಸುನೀತಾ ಎ, ಸಾವಿತ್ರಿ, ಕಾವ್ಯ, ಉಷಾಲತ, ರೈಹಾನ, ಪೌಝಿಯ, ಚಂದ್ರಿಕಾ, ಶೋಭಾ, ಲತಾಕುಮಾರಿ, ವಿಜಯಾ ಹಾಗೂ ಪೋಷಕ ವೃಂದದವರು, ಹಿರಿಯ ವಿದ್ಯಾರ್ಥಿಗಳು, ಅಕ್ಷರದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಕುಮಾರ್ ಕೆ.ಜೆ ಸ್ವಾಗತಿಸಿದರು.ಪದವೀಧರ ಶಿಕ್ಷಕಿ ವಿಜಯಲಕ್ಷ್ಮಿ ವಂದಿಸಿದರು ಶಿಕ್ಷಕಿ ಮಧುಶ್ರೀ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಲಕ್ಷ್ಮಿ, ಸರಿತಾ ಕೆ, ಯಶಸ್ವಿನಿ, ಸೌಮ್ಯ,ಹರಿಣಾಕ್ಷಿ ಸಹಕರಿಸಿದರು. ನಂತರ ಮಕ್ಕಳಿಂದ ಭಾಷಣ, ದೇಶಭಕ್ತಿ ಗೀತಗಾಯನ ಸಾಮೂಹಿಕ ನೃತ್ಯ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಬಳಿಕ ಸಿಹಿ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.










