Home ಸ್ವಾತಂತ್ರ್ಯೋತ್ಸವ ವಿಶೇಷ ಹೊಸಗದ್ದೆ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಹೊಸಗದ್ದೆ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

0

ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಹೊಸಗದ್ದೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.


ಎಸ್‌ಡಿಎಂಸಿ ಅಧ್ಯಕ್ಷೆ ವಸಂತಲಕ್ಷ್ಮೀ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷ ದೇವಪ್ಪ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹಶಿಕ್ಷಕಿ ವಿದ್ಯಾ ಕೆ., ಬಜತ್ತೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಗಂಗಾಧರ ಗೌಡ ಅವರು ಸ್ವಾತಂತ್ರ್ಯ ದಿನಾಚರಣೆ ಕುರಿತು ಮಾತನಾಡಿದರು. ಮುಖ್ಯಶಿಕ್ಷಕಿ ಸೀತಮ್ಮ ಕೆ.ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕಿ ಮಾಲತಿ ಕಾರ್ಯಕ್ರಮ ನಿರೂಪಿಸಿದರು. ಚಿತ್ರಾವತಿ ವಂದಿಸಿದರು. ಪವಿತ್ರ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳಿಂದ ಭಾಷಣ, ನೃತ್ಯ, ದೇಶಭಕ್ತಿ ಗೀತೆ ಮತ್ತಿತರರ ಕಾರ್ಯಕ್ರಮಗಳು ನಡೆಯಿತು.

ಎಸ್‌ಡಿಎಂಸಿ ಸದಸ್ಯರು, ಮಕ್ಕಳ ಪೋಷಕರು, ಹಳೆವಿದ್ಯಾರ್ಥಿಗಳು, ಅಕ್ಷರ ದಾಸೋಹ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳು, ಊರ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಮಧ್ಯಾಹ್ನ ಸಿಹಿಯೂಟ ನೀಡಲಾಯಿತು.

NO COMMENTS

LEAVE A REPLY

Please enter your comment!
Please enter your name here

error: Content is protected !!
Breaking