ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕಡಬ: ಕೊಯಿಲ ಗ್ರಾಮದ ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾತಂತ್ರೋತ್ಸವದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಶೇಖರ ಗೌಡ ಕೊಲ್ಯ ಧ್ವಜರೋಹಣಗೈದು ಶುಭಹಾರೈಸಿದರು.


ಶಾಲಾ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಗೌಡ ಎರ್ಮಡ್ಕ, ಕೊಯಿಲ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಯತೀಶ್ ಸೀಗೆತ್ತಡಿ, ಎಸ್ ಡಿ ಎಂ ಸಿ ಸದಸ್ಯರು , ವಿವಿಧ ಸಂಘ ಸಂಸ್ಥೆಗಳ ಮುಖಂಡರು ಮೊದಲಾದವರು ಇದ್ದರು. ಮುಖ್ಯ ಶಿಕ್ಷಕಿ ವಾರಿಜಾ ಬಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ವನಜಾ ಕೆ ವಂದಿಸಿದರು. ಶಿಕ್ಷಕಿ ತಾರಾದೇವಿ, ಶಿಕ್ಷಕ ಶೇಖರ ಬಲ್ಯ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಅಂಜನಾ, ಗೌರವ ಶಿಕ್ಷಕಿ ಜಯಶ್ರೀ ಪಿ ಸಹಕರಿಸಿದರು. ವಿದ್ಯಾರ್ಥಿಗಳಿಂದ ಗೋಳಿತ್ತಡಿ-ಏಣಿತಡ್ಕ ರಸ್ತೆಯಲ್ಲಿ ಮೆರವಣಿಗೆ ನಡೆಯಿತು. ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ, ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here