







ರಾಮಕುಂಜ; ಆ.29ರಂದು ರಾಮಕುಂಜ ಶ್ರೀ ವಿಶ್ವೇಶ ತೀರ್ಥ ಸೌಧ ಸಭಾಂಗಣದಲ್ಲಿ ನಡೆಯಲಿರುವ ಕಡಬ ತಾಲೂಕು 5ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆ.15ರಂದು ರಾಮಕುಂಜ ಶ್ರೀ ರಾಮಕುಂಜೇಶ್ವರ ವಸತಿ ಶಾಲೆಯಲ್ಲಿ ನಡೆಯಿತು.


ಕನ್ನಡ ಸಾಹಿತ್ಯ ಪರಿಷತ್‌ನ ದ.ಕ.ಜಿಲ್ಲಾ ಅಧ್ಯಕ್ಷ ಡಾ| ಎಂ.ಪಿ.ಶ್ರೀನಾಥ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ, ಕನ್ನಡ ಸಾಹಿತ್ಯ ಪರಿಷತ್‌ನ ಕಡಬ ತಾಲೂಕು ಘಟಕದ ನೇತೃತ್ವದಲ್ಲಿ ನಡೆಯುವ 5ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಯಲಿ ಎಂದು ಶುಭಹಾರೈಸಿದರು. ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕೋಶಾಧ್ಯಕ್ಷ ಬಿ.ಐತ್ತಪ್ಪ ನಾಯ್ಕ್, ದ.ಕ.ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ರಾಜೇಶ್ವರಿ ಎಂ., ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಅಧ್ಯಕ್ಷ ಚಂದ್ರಶೇಖರ ಪೆರಾಲ್, ಬೆಳ್ತಂಗಡಿ ತಾಲೂಕು ಅಧ್ಯಕ್ಷ ಯದುಪತಿ ಗೌಡ, ಮೂಡಬಿದಿರೆ ತಾಲೂಕು ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಕೆ., ಜಿಲ್ಲಾ ಸಮಿತಿಯ ಪೂವಪ್ಪ ನೇರಳಕಟ್ಟೆ, ರಾಮಚಂದ್ರ ಪಲ್ಲತಡ್ಕ ಸುಳ್ಯ, ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವಾಧ್ಯಕ್ಷ ಜನಾರ್ದನ ಗೌಡ ಪಣೆಮಜಲು, ಗೌರವ ಕಾರ್ಯದರ್ಶಿ ನಾಗರಾಜ್ ಎನ್.ಕೆ.ಕಡಬ, ಗೌರವ ಕೋಶಾಧ್ಯಕ್ಷ ಕೆ.ಬಾಲಚಂದ್ರ ಮುಚ್ಚಿಂತಾಯ, ಹೋಬಳಿ ಅಧ್ಯಕ್ಷ ಪದ್ಮಪ್ಪ ಗೌಡ, ಸದಸ್ಯರಾದ ಪುಷ್ಪಾವತಿ ಎ., ಪ್ರೇಮಾ ಬಿ., ಎ.ಎನ್.ಕೊಳಂಬೆ, ಕಡಬ ತಾಲೂಕು 5ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಸಂಚಾಲಕ ಕಿಜಾನ ಬಾಲಕೃಷ್ಣ, ಪ್ರಧಾನ ಕಾರ್ಯದರ್ಶಿ ಗಾಯತ್ರಿ ಯು.ಎನ್., ಸದಸ್ಯರಾದ ಆನಂದ ಎಸ್.ಟಿ., ಲೋಹಿತಾ ಎ., ಹರೀಶ್ ಆಚಾರ್ಯ ಎಂ. ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ಅಧ್ಯಕ್ಷ ಕೆ.ಸೇಸಪ್ಪ ರೈ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಕಿಶೋರ್ ಕುಮಾರ್ ಬಿ. ವಂದಿಸಿದರು.













