








ರಾಮಕುಂಜ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆಯೋಜಿಸಿರುವ ವಿವಿಧ ಹಂತದ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸ್ಕೌಟ್ಸ್, ಗೈಡ್ಸ್ ಮತ್ತು ಕಬ್ ಬುಲ್-ಬುಲ್ ವಿದ್ಯಾರ್ಥಿಗಳಿಗೆ ತೃತೀಯ ಚರಣ, ಸುವರ್ಣಗರಿ ಅವಾರ್ಡ್ ಪ್ರಶಸ್ತಿ ಪತ್ರವನ್ನು ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅವರು ಆ.15ರಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನೀಡಿ ಗೌರವಿಸಿದರು.





ಈ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯಗುರು ವೈ.ಸಾಂತಪ್ಪ ಗೌಡ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ ಗೌಡ ಸಾನಿಧ್ಯ ವಳೆಂಜ, ಶಾಲಾ ಮುಖ್ಯಗುರುಗಳು, ಆಡಳಿತಾಧಿಕಾರಿಗಳು, ನಿಲಯದ ವ್ಯವಸ್ಥಾಪಕರು, ಶಾಲಾ ಶಿಕ್ಷಕ- ಶಿಕ್ಷಕೇತರ ವೃಂದ, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.













