






ಪುಣಚ: ಇಲ್ಲಿನ ಶ್ರೀ ಮಹಿಷಮರ್ದಿನಿ ದೇವಸ್ಥಾನದ ನಾಗ ಸನ್ನಿಧಿಯಲ್ಲಿ ಆ.17ರಂದು ನಾಗರಪಂಚಮಿ ಆಚರಣೆ ನಡೆಯಿತು. ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯರ ನೇತೃತ್ವದಲ್ಲಿ ನಾಗ ದೇವರಿಗೆ ವಿವಿಧ ಅಭಿಷೇಕ, ನಾಗತಂಬಿಲ ಸೇವೆ ನಡೆದು ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು.


ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.













