







ಕಾಣಿಯೂರು: ಪುಣ್ಚತ್ತಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಸೆ 14ರಂದು ಪುಣ್ಚತ್ತಾರು ಶ್ರೀಹರಿ ಭಜನಾ ಮಂದಿರದಲ್ಲಿ ನಡೆಯಲಿರುವ 9ನೇ ವರ್ಷದ
ಶ್ರೀ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಆ 17ರಂದು ಪುಣ್ಚತ್ತಾರು ಶ್ರೀ ಹರಿ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.












