ಸ್ವಾತಂತ್ರ್ಯ ದಿನಾಚರಣೆ: AIMRA ಪುತ್ತೂರಿನಿಂದ ರೋಗಿಗಳಿಗೆ ಹಣ್ಣು ವಿತರಣೆ

0

ಪುತ್ತೂರು: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ AIMRA ಪುತ್ತೂರು ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ವತಿಯಿಂದ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸಮಾಜ ಸೇವಾ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದ ಅಂಗವಾಗಿ ಆಸ್ಪತ್ರೆಯಲ್ಲಿದ್ದ ಸುಮಾರು 100 ಮಂದಿ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಲಾಯಿತು. ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮಾನವೀಯತೆ ಹಾಗೂ ಸಾಮಾಜಿಕ ಕಾಳಜಿಯನ್ನು ಸಾರುವ ಉದ್ದೇಶದಿಂದ ಈ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


AIMRA ಪುತ್ತೂರು ಅಧ್ಯಕ್ಷ ಚೇತನ್ ಕುಮಾರ್, ಕಾರ್ಯದರ್ಶಿ ಹಫೀಜ್, ಖಜಾಂಚಿ ಸಂಪತ್, ಉಪಾಧ್ಯಕ್ಷ ಮಹೇಶ್, ಸಲಹೆಗಾರರಾದ ಶಶಿರಾಜ್ ರೈ ಹಾಗೂ ಪ್ರವೀಣ್ ಅಮೈ, ಸದಸ್ಯರಾದ ನಾಸಿರ್, ಅಶ್ರಫ್ ಮತ್ತು ಜಿಯಾದ್ ಉಪಸ್ಥಿತರಿದ್ದರು. ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಯದುರಾಜ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. AIMRA ಪುತ್ತೂರು ಹಮ್ಮಿಕೊಂಡ ಈ ಕಾರ್ಯಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

LEAVE A REPLY

Please enter your comment!
Please enter your name here