







ಕಾಣಿಯೂರು: ಪುಣ್ಚತ್ತಾರು ಶ್ರೀ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗತಂಬಿಲ, ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸಹಿತ ವಿವಿಧ ಸೇವೆಗಳು ಆ 17ರಂದು ನಡೆಯಿತು.


ಅರ್ಚಕ ಚಿದಾನಂದ ಉಪಾಧ್ಯಾಯ ಕಲ್ಪಡ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀಹರಿ ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು,ಊರವರು ಉಪಸ್ಥಿತರಿದ್ದರು.













