







ಕಾಣಿಯೂರು: ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಶ್ರೀ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗತಂಬಿಲ, ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸಹಿತ ವಿವಿಧ ಸೇವೆಗಳು ಆ 17ರಂದು ನಡೆಯಿತು.


ಕ್ಷೇತ್ರದ ಅರ್ಚಕ ವೆಂಕಟಕೃಷ್ಣ ಭಟ್ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ಧರ್ಮಪಾಲ ಗೌಡ ಕರಂದ್ಲಾಜೆ ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.













