







ಕಾಣಿಯೂರು: ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗತಂಬಿಲ, ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸಹಿತ ವಿವಿಧ ಸೇವೆಗಳು ಆ 17ರಂದು ನಡೆಯಿತು.


ಅರ್ಚಕ ಸುಬ್ರಹ್ಮಣ್ಯ ಉಪಾಧ್ಯಾಯ ಅವರು ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶೀಯ ಮೊಕ್ತೇಸರರು, ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರು,ಭಕ್ತಾಧಿಗಳು ಉಪಸ್ಥಿತರಿದ್ದರು.













