









ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ ಮೂಲ ನಾಗನಕಟ್ಟೆಯಲ್ಲಿ ನಾಗರ ಪಂಚಮಿ ಅಂಗವಾಗಿ ಅಭಿಷೇಕ, ನಾಗತಂಬಿಲ ಅರ್ಚಕ ಬಂಬಿಲ ಸುಬ್ರಹ್ಮಣ್ಯ ನಿಡ್ವಣ್ಣಾಯ ಅವರ ಪೌರೋಹಿತ್ಯದಲ್ಲಿ ನಡೆಯಿತು.



ಈ ಸಂದರ್ಭದಲ್ಲಿ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಶಿರಾಡಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ದೀಕ್ಷಿತ್ ಜೈನ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.










