ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ

0

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿ ಸಲುವಾಗಿ ನಾಗನಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ ಮುಂತಾದ ಸೇವೆಗಳು ನಡೆಯಿತು.


ಬೆಳಗ್ಗಿನಿಂದಲೇ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾಧಿಗಳು ದೇವಳದ ಅರ್ಚಕ ಮಧುಸೂಧನ್ ಭಟ್ ಮೂಲಕ ನಾಗನಿಗೆ ತಮ್ಮ ಇಷ್ಟಾರ್ಥ ಸೇವೆಗಳನ್ನು ನೆರವೇರಿಸಿದರು. ಹಾಗೂ ಸಾಮೂಹಿಕ ನಾಗತಂಬಿಲ ಸೇವೆ ಅರ್ಪಿಸಿ ಪುನೀತರಾದರು.


ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯಕ್, ಸದಸ್ಯರಾದ ದೇವಿದಾಸ ರೈ, ವೆಂಕಪ್ಪ ಪೂಜಾರಿ, ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ, ಮಾಜಿ ಸದಸ್ಯರದ ಜಯಂತ ಪೊರೋಳಿ, ಕಂಗ್ವೆ ವಿಶ್ವನಾಥ ಶೆಟ್ಟ ಉಪಸ್ಥಿತರಿದ್ದರು. ದೇವಳದ ವ್ಯವಸ್ಥಾಪಕ ವೆಂಕಟೇಶ್ ರಾವ್, ಸಿಬ್ಬಂದಿಗಳಾದ ಕೃಷ್ಣ ಪ್ರಸಾದ್ ಬಡಿಲ, ದಿವಾಕರ, ಪದ್ಮನಾಭ, ಭವಾನಿ ಶಂಕರ್, ಸುಧಾಕರ ಶೆಟ್ಟಿ, ಕೃಷ್ಣಪ್ರಸಾದ್ ಮುಂಚೂಣಿಯಲ್ಲಿ ನಿಂತು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here