







ಹಿರೇಬಂಡಾಡಿ: ಶ್ರೀ ಷಣ್ಮುಖ ಮಿತ್ರ ವೃಂದ ಹಿರೇಬಂಡಾಡಿ ಇವರಿಂದ ಹಿರೇಬಂಡಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಡ್ ಸೆಟ್ ಕೊಡುಗೆ ನೀಡಲಾಯಿತು.


ಹಿರೇಬಂಡಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ್ಞಾನ ದೀವಿಗೆ ಪಡೆದ ಹಿರಿಯ ವಿದ್ಯಾರ್ಥಿಗಳು ಶ್ರೀ ಷಣ್ಮುಖ ಮಿತ್ರವೃಂದ ಸಂಘ ಸ್ಥಾಪಿಸಿ ಅದರ ಮೂಲಕ ಹಲವಾರು ಸಾಮಾಜಿಕ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಇದೀಗ ತಾವು ವಿದ್ಯಾಭ್ಯಾಸ ಮಾಡಿದ ಶಾಲೆಯಲ್ಲಿ ಮಕ್ಕಳ ಪಠ್ಯೇತರ ಚಟುವಟಿಕೆಗೆ ಬ್ಯಾಂಡ್ ಸೆಟ್ ಕೊಡುಗೆಯಾಗಿ ನೀಡಿದರು. 80ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಶಾಲೆಯ ಅಧ್ಯಾಪಕ ವೃಂದ, ಶಾಲಾಭಿವೃದ್ಧಿ ಸಮಿತಿಯ ಸಮ್ಮುಖದಲ್ಲಿ ಶ್ರೀ ಷಣ್ಮುಖ ಮಿತ್ರ ವೃಂದದ ಸದಸ್ಯರು ಕೊಡುಗೆ ಹಸ್ತಾಂತರಿಸಿದರು.













