ಹಿರೇಬಂಡಾಡಿ ಶಾಲೆಯಲ್ಲಿ ’ಆಟಿದ ಗೌಜಿ’

0

ಹಿರೇಬಂಡಾಡಿ: ಇಲ್ಲಿನ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಆಟಿದ ಗಮ್ಮತ್ ಗೌಜಿ ಆ.15ರಂದು ನಡೆಯಿತು.


ಮುಖ್ಯ ಅತಿಥಿಯಾಗಿದ್ದ ಶಿಕ್ಷಕ ಪ್ರಶಾಂತ್ ಅನಂತಾಡಿ ಅವರು ಹಿಂಗಾರ ಅರಳಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂತಹ ಆಚರಣೆಗಳ ಮೂಲಕ ತುಳುನಾಡಿನ ಆಚಾರ,ವಿಚಾರ, ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಹಕಾರಿಯಾಗುತ್ತದೆ ಎಂದರು. ಎಸ್‌ಡಿಎಸಂಸಿ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಮಾಳ ದೀಪ ಪ್ರಜ್ವಲಿಸಿದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವೀನ್ ಪಡ್ಪು, ನಿವೃತ್ತ ಶಿಕ್ಷಕಿ ದೇಜಮ್ಮ, ಎಸ್‌ಡಿಎಂಸಿ ಉಪಾಧ್ಯಕ್ಷ ತಿಮ್ಮಪ್ಪ ಗೌಡ, ಪಾಲೆತ್ತಡಿ ಅಂಗನವಾಡಿ ಶಿಕ್ಷಕಿ ಬೇಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಸ್‌ಡಿಎಂಸಿ ಅಧ್ಯಕ್ಷೆ ಕವಿತಾ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯಗುರು ಬಾಬು ಟಿ.ಸ್ವಾಗತಿಸಿ, ವಂದಿಸಿದರು. ಅತಿಥಿ ಶಿಕ್ಷಕಿ ರಾಧಿಕಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಳು, ಶಾಲಾ ಶಿಕ್ಷಕರು, ಅಡುಗೆ ಸಿಬ್ಬಂದಿಗಳು, ಮಕ್ಕಳ ಪೋಷಕರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಆಟಿ ತಿಂಗಳ ತಿಂಡಿ ತಿನಿಸುಗಳ ಪ್ರದರ್ಶನ, ಪ್ರಾಚೀನ ಕಾಲದ ವಸ್ತುಗಳ ಪ್ರದರ್ಶನ ನಡೆಯಿತು.

LEAVE A REPLY

Please enter your comment!
Please enter your name here