ಪುತ್ತೂರು ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರೇಷ್ಮಾ ಶೆಟ್ಟಿ ಕಂಪ

0

ಪುತ್ತೂರು: ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ರೇಷ್ಮಾ ಶೆಟ್ಟಿ ಕಂಪ ನೇಮಕಗೊಂಡಿದ್ದಾರೆ.

ಶಾಸಕ ಅಶೋಕ್ ಕುಮಾರ್ ರೈ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಅವರ ಸೂಚನೆಯಂತೆ ಮಹಿಳಾ ಕಾಂಗ್ರೆಸ್ ನ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಅವರ ಶಿಫಾರಸ್ಸಿನಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ಉಷಾ ಅಂಚನ್ ನೇಮಕಗೊಳಿಸಿ ಆದೇಶಿಸಿದ್ದಾರೆ.

ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಮಂಡಲ ಪ್ರಧಾನರಾಗಿದ್ದ ಕಂಪ ನಾರಾಯಣ ಶೆಟ್ಟಿ ಮತ್ತು ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ರಾಯಲ್‌ ಸೌಹಾರ್ದ ಕೂಟದ ನಿರ್ದೇಶಕಿ ಮತ್ತು ಕುಕ್ಕಿನಡ್ಕ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆಯಾಗಿದ್ದ ಗುಲಾಬಿ ಎನ್ ಶೆಟ್ಟಿ ದಂಪತಿ ಪುತ್ರಿಯಾಗಿರುವ ರೇಷ್ಮಾ ಅವರು ಎಂ.ಎ ಪದವೀಧರಾಗಿ ಬೆಂಗಳೂರಿನಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಬೆಂಗಳೂರಿನ ಕಲೆ ಮತ್ತು ಸಂಸ್ಕತಿ ಸಂಘದ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು. 

ಹಿಂದೂಸ್ತಾನ ವಿಮಾನ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾಗಿರುವ ಪತಿ ಚಂದ್ರಶೇಖರ ಶೆಟ್ಟಿ ಹಾಗೂ ಇಬ್ಬರು ಪುತ್ರರೊಂದಿಗೆ ಮುಂಡೂರಿನ ಕಂಪದಲ್ಲಿ ವಾಸ್ತವ್ಯವಿದ್ದಾರೆ.

LEAVE A REPLY

Please enter your comment!
Please enter your name here