







ಪುತ್ತೂರು: ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬೆಟ್ಟಂಪಾಡಿಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ರಂಗನಾಥ ರೈ ಗುತ್ತು ಧ್ವಜಾರೋಹಣ ನೆರವೇರಿಸಿ ಮಕ್ಕಳಲ್ಲಿ ದೇಶಭಕ್ತಿಯ ಹುರುಪನ್ನು ಹೆಚ್ಚಿಸುವ ಕಾರ್ಯ ವೈಖರಿಗಳು ಮೂಡಿ ಬರಲಿ. ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹಲವು ಮಹಾತ್ಮರು ಪ್ರಾಣ ತ್ಯಾಗ ಮಾಡಿರುತ್ತಾರೆ. ಅವರ ತ್ಯಾಗ ಬಲಿದಾನಗಳು ಮಾದರಿಯಾಗಲಿ ಎಂದು ಶುಭಾಶಯ ಕೋರಿದರು.


ಮಕ್ಕಳು ಹುತಾತ್ಮ ನಾಯಕರ ಘೋಷಣೆಗಳನ್ನು ಕೂಗಿದರು. ವಿದ್ಯಾರ್ಥಿಗಳಿಂದ ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮುಖ್ಯಗುರು ರಾಜೇಶ್ ಎನ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹ ಶಿಕ್ಷಕಿ ಕುಮಾರಿ ಭಾಗ್ಯಶ್ರೀ ರೈ ಕಾರ್ಯಕ್ರಮ ನಿರೂಪಿಸಿದರು.













