ಆ.19:ಅಕ್ಷಯ ಕೆರಿಯರ್ ಅಕಾಡೆಮಿ ಸ್ಥಳಾಂತರಗೊಂಡು ದರ್ಬೆ ವಿಘ್ನೇಶ್ ಕಾಂಪ್ಲೆಕ್ಸ್ ನಲ್ಲಿ  ಶುಭಾರಂಭ

0

ಪುತ್ತೂರು: ದರ್ಬೆ-ಬೈಪಾಸ್ ಆರಾಧ್ಯ ಕಾಂಪ್ಲೆಕ್ಸ್ ನಲ್ಲಿನ  ಸಂಪ್ಯ ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಹಾಗೂ  ಸರ್ಕಾರದಿಂದ ಪ್ರಮಾಣೀಕರಿಸಲ್ಪಟ್ಟ ಸಂಸ್ಥೆ ಹಾಗೂ NSDC ಮಾನ್ಯತೆ ಪಡೆದ ಸಂಸ್ಥೆಯ ವೃತ್ತಿಪರ ಕೋರ್ಸ್‌ಗಳು ಮತ್ತು ವೃತ್ತಿ ತರಬೇತಿ ಸಂಸ್ಥೆ ಕೆರಿಯರ್ ಡೆಸ್ಟಿನಿ ಮಂಗಳೂರು ಮತ್ತು ಅಭಿಜ್ಞಾ ಎಜುಕೇಶನ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ “ಅಕ್ಷಯ ಕೆರಿಯರ್ ಅಕಾಡೆಮಿ”ಯ ನೂತನ ಕಛೇರಿಯು ದರ್ಬೆ ಜಂಕ್ಷನ್ ನಲ್ಲಿನ ವಿಘ್ನೇಶ್ ಕಾಂಪ್ಲೆಕ್ಸ್ ನ ಎರಡನೇ ಮಹಡಿಯಲ್ಲಿ ಆ.19 ರಂದು ಸ್ಥಳಾಂತರಗೊಂಡು ಶುಭಾರಂಭಗೊಳ್ಳಲಿದೆ.

ಸುದ್ದಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ.ಯು.ಪಿ ಶಿವಾನಂದರವರು ನೂತನ ಕಛೇರಿಯನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಯಂತ್ ನಡುಬೈಲುರವರು ವಹಿಸಿಕೊಳ್ಳಲಿದ್ದಾರೆ. ಗೌರವಾನ್ವಿತ ಅತಿಥಿಗಳಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಕೊಂಬೆಟ್ಟು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಪುತ್ತಿಲ ಪರಿವಾರ ಟ್ರಸ್ಟ್ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ, ಹಿರಿಯ ಕ್ಯಾಬಿನ್ ಕ್ರೂ ಶ್ರೀಮತಿ ದೀಪಶ್ರೀ, ಇಂಡಿಗೋ ಮಂಗಳೂರು ಟೀಮ್ ಹೆಡ್ ಸಚಿನ್, ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್, ವಿಘ್ನೇಶ್ ಕಾಂಪ್ಲೆಕ್ಸ್ ಮಾಲಕ ದಿನೇಶ್ ಪಿ.ರವರು ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ80883 81678 | 73386 76611 ನಂಬರಿಗೆ ಸಂಪರ್ಕಿಸಬಹುದಾಗಿದೆ  ಎಂದು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here