ಸುಳ್ಯದಲ್ಲಿ ಅಲ್ಪಸಂಖ್ಯಾತರ ವಸತಿ ನಿಲಯ ಮಂಜೂರು ಮಾಡಲು ಮನವಿ

0

ಪುತ್ತೂರು: ಸುಳ್ಯ ಗ್ರಾಮೀಣ ಪ್ರದೇಶವಾಗಿದ್ದರೂ ವಿಶೇಷ ಭೌಗೋಳಿಕ ಹಿನ್ನೆಲೆ ಹೊಂದಿದ್ದು, ಕೇರಳ ರಾಜ್ಯ ಹಾಗೂ ಕೊಡಗು ಜಿಲ್ಲೆಯ ಗಡಿ ಪ್ರದೇಶವಾಗಿದೆ. ಕೆ.ಜಿ ಯಿಂದ ಪಿ.ಜಿ ವರೆಗೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಮತ್ತು ಇಂಜಿನಿಯರಿಂಗ್, ನರ್ಸಿಂಗ್, ಮೆಡಿಕಲ್, ಡೆಂಟಲ್, ಪಾಲಿಟೆಕ್ನಿಕ್ ಮೊದಲಾದ ಎಲ್ಲಾ ಕೋರ್ಸ್‌ಗಳನ್ನು ಹೊಂದಿರುವ ತಾಲೂಕು ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯದ ಕೊರತೆ ಇದೆ.ಇತ್ತೀಚೆಗೆ ಸಚಿವರು ಸುಳ್ಯಕ್ಕೆ ಪ್ರಗತಿ ಪರಿಶೀಲನೆಗೆ ಆಗಮಿಸಿದ್ದ ಸಂದರ್ಭದಲ್ಲಿ ಈ ಬಗ್ಗೆ ಗಮನ ಸೆಳೆಯಲಾಗಿದ್ದು, ಸಚಿವರು ಸಹಮತ ಸೂಚಿಸಿದ್ದರು. ಆದ್ದರಿಂದ ಸುಳ್ಯ ತಾಲೂಕು ಕೇಂದ್ರದಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯ ಮಂಜೂರು ಮಾಡುವಂತೆ ಆದೇಶ ನೀಡಬೇಕಾಗಿ ಮನವಿಯಲ್ಲಿ ತಿಳಿಸಲಾಗಿದೆ.ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯ ಶವಾದ್ ಸುಳ್ಯ, ಸುಳ್ಯ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ವ್ಯವಸ್ಥಾಪಕ ಕಮಾಲುದ್ದೀನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here