







ವಿಟ್ಲ:ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ವ್ಯಕ್ತಿಯೋರ್ವರನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಂಡಗಾಯಿ ನಿವಾಸಿ ಉಮೇಶ್ (53 ವ.) ಬಂಧಿತ ಆರೋಪಿ. ಆ.15ರಂದು ಅಪ್ರಾಪ್ತ ಪ್ರಾಯದ ಬಾಲಕ ಬಸ್ಸೊಂದರಲ್ಲಿ ತೆರಳುತ್ತಿದ್ದ ವೇಳೆ ಉಮೇಶ್ ಎಂಬವರು ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿದ್ದರು ಮಾತ್ರವಲ್ಲದೆ ಬಳಿಕ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಒಡ್ಡಿದ್ದರು ಎಂದು ಆರೋಪಿಸಿ ಬಾಲಕ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.













