







ಪುತ್ತೂರು: ಪಾಣಾಜೆ ಗ್ರಾಮ ಪಂಚಾಯತ್ನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆ.19ರಂದು ಬೆಳಿಗ್ಗೆ 10.30ರಿಂದ ನಡೆಯಲಿದೆ.


ಆ.11ರಂದು ನಿಗದಿಯಾಗಿದ್ದ ಗ್ರಾಮಸಭೆ ಮುಂದೂಡಿಕೆಯಾಗಿದ್ದ ಹಿನ್ನಲೆಯಲ್ಲಿ ಆ.19ರಂದು ನಡೆಯಲಿದೆ. ಗ್ರಾಮಸ್ಥರು ಗ್ರಾಮಸಭೆಯಲ್ಲಿ ಭಾಗವಹಿಸಿ ಗ್ರಾಮದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಅಭಿವೃದ್ಧಿ ಅಧಿಕಾರಿ ಹಾಗೂ ಆಡಳಿತಾಧಿಕಾರಿ ಪ್ರಕಟಣೆ ತಿಳಿಸಿದೆ.













