






ಪುತ್ತೂರು: ಪುತ್ತೂರು ಕೆಎಸ್‌ಆರ್‌ಟಿಸಿ ಸಂಸ್ಥೆಯಿಂದ ಸಂಚಾರ ನಿಯಂತ್ರಕರಾಗಿ ಬಡ್ತಿ ಹೊಂದಿದ ಜೀವನ್ ಸಂತೋಷ್ ಮಾರ್ಟಿಸ್ ಮತ್ತು ವಿಭಾಗೀಯ ಕಾರ್ಯಾಲಯಕ್ಕೆ ವರ್ಗಾವಣೆಗೊಂಡ ಸದಾಶಿವ ಇಂಗಲಿ ಅವರಿಗೆ ಸಂಸ್ಥೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ಆ.17ರಂದು ನಡೆಯಿತು.



ಕೆಎಸ್‌ಆರ್‌ಟಿಸಿ ಪುತ್ತೂರು ಘಟಕ ವ್ಯವಸ್ಥಾಪಕ ಸುಬ್ರಹ್ಮಣ್ಯ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೀವನ್ ಮಾರ್ಟಿಸ್ ಮತ್ತು ಸದಾಶಿವ ಇಂಗಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಂಸ್ಥೆಯ ಹಿರಿಯ ಅಧಿಕಾರಿಗಳು, ಸಹಾಯಕ ಸಿಬ್ಬಂದಿಗಳು, ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.













