







ಪುತ್ತೂರು: ಸೆ.12 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸದರಿ ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.


ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾಗಿರುವ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಅವರು ಪತ್ರಿಕಾ ಪ್ರಲಟಣೆಯಲ್ಲಿ ತಿಳಿಸಿದ್ದಾರೆ.













