







ಪುತ್ತೂರು: ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಹಾಗೂ ಪುತ್ತೂರು ನಗರ ಮಂಡಲದ ಪದಾಧಿಕಾರಿಗಳು ಹಾಗೂ ಪ್ರಮುಖರ ಸಭೆಯು ಬಿಜೆಪಿ ಕಚೇರಿಯಲ್ಲಿ ಆ.19ರಂದು ನಡೆಯಿತು.


ಸಭೆಯಲ್ಲಿ ಸಚಿವ ಬಿ. ನಾಗೇಂದ್ರ ಅವರಿಗೆ ಸಂಬಂಧಿಸಿದ ಸಚಿವ ಸ್ಥಾನ ವಿಚಾರ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ವೈಫಲ್ಯಗಳ ವಿರುದ್ಧ ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಿರುವ ಪ್ರತಿಭಟನೆ ಹಾಗೂ ಹೋರಾಟ ಕಾರ್ಯಕ್ರಮಗಳ ಕುರಿತು ಪ್ರಮುಖವಾಗಿ ಚರ್ಚಿಸಲಾಯಿತು.



ಮುಂಬರುವ ಹೋರಾಟ ಮತ್ತು ಪ್ರತಿಭಟನಾ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಾಗೂ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಸಭೆಯಲ್ಲಿ ಪಕ್ಷದ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಲಾಯಿತು.
ಕಾರ್ಯಕ್ರಮಗಳ ರೂಪುರೇಷೆ, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಭಾಗವಹಿಸುವಿಕೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಯಿತು. ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರು, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಮಂಡಲದ ಪ್ರಧಾನ ಕಾರ್ಯದರ್ಶಿಗಳು ಮತ್ತು ಮಂಡಲದ ವಿವಿಧ ಜವಾಬ್ದಾರಿ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.










